ಉಡುಪಿ: ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ಳೆ ಗ್ರಾಮದ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ (ಫೆ.25ರಂದು) ಮುಂಜಾನೆ ನಡೆದಿದೆ.
ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ ಸುಮಾರಿಗೆ ಈ ಘಟನೆ ನಡೆದಿದೆ. ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಇದರ ಪರಿಣಾಮ ಚಾಲಕ ಸುಬ್ರಮಣ್ಯ ಟಿಪ್ಪರ್ ಅಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಸ್ಥಳೀಯರ ಸಹಕಾರದೊಂದಿಗೆ ಜೆಸಿಬಿ ಮೂಲಕ ಲಾರಿಯನ್ನು ಎತ್ತಲಾಯಿತು. ಚಾಲಕನ ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ












