ಬೈಂದೂರು: ಯಳಜಿತ್ ಗ್ರಾಮದ ಗೋವಿಂದ ಮಾಸ್ಟರ್ ಮನೆ ಸಮೀಪದ ತಿರುವು ರಸ್ತೆಯಲ್ಲಿ ಸ್ಕೂಟರ್ ಸ್ಟಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ನಾಗರಾಜ್ ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಮೃತರ ಪತ್ನಿ, ಸಹಸವಾರೆ ಆಶಾ ಎಂಬವರು ಗಾಯಗೊಂಡಿದ್ದರು. ಇವರಿಬ್ಬರು ಸ್ಕೂಟರಿನಲ್ಲಿ ಫೆ.3ರಂದು ಸಂಜೆ ಬೈಂದೂರು ಕಡೆಗೆ ಹೋಗುತ್ತಿದ್ದಾಗ ಸ್ಕೂಟರ್ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ನಾಗರಾಜ್, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಫೆ.8ರಂದು ಮಧ್ಯಾಹ್ನ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












