ಬೈಂದೂರು: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು.

ಬೈಂದೂರು: ತೋಟದಲ್ಲಿ ತೆಂಗಿನ ಕಾಯಿ ಹೆಕ್ಕಲು ಹೋದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜು.10ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಬಡಾಕೆರೆ ನಿವಾಸಿ ಮಂಜುನಾಥ(85) ಎಂದು ಗುರುತಿಸಲಾಗಿದೆ.

ತೋಟಕ್ಕೆ ತೆಂಗಿನಕಾಯಿ ಹೆಕ್ಕಲು ಹೋದ ಇವರು, ಬಾವಿಯ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.