ಬೈಂದೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ವಿಶೇಷ ಪೂಜೆ

ಬೈಂದೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಬಿ ವೈ ರಾಘವೇಂದ್ರ ಅವರಿಗೆ ಬೈಂದೂರು ಕ್ಷೇತ್ರದಲ್ಲಿ 1 ಲಕ್ಷ ಲೀಡ್ ಕೊಡಿಸುವ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಬೈಂದೂರಿನ ಕೊಲ್ಲೂರು ಮೂಕಾಂಬಿಕಾ ಸನ್ನಿಧಾನಕ್ಕೆ ಕರೆಸುವ ಶಾಸಕ ಗುರುರಾಜ್ ಗಂಟಿಹೊಳೆ ಅವರ ಸಂಕಲ್ಪಕ್ಕೆ ಶಕ್ತಿ ತುಂಬಲು ಕೊಲ್ಲೂರಿನಲ್ಲಿ ಯುವ ಮೋರ್ಚಾ ತಂಡದಿಂದ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಉಪಾಧ್ಯಕ್ಷರಾದ ರಾಘವೇಂದ್ರ ನೆಂಪ್, ಯುವ ಮೋರ್ಚ ಮಂಡಲ ಅಧ್ಯಕ್ಷರಾದ ಗಜೇಂದ್ರ ಎಸ್ ಬೇಲೆಮನೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನುರ್ ಮೆಂಡನ್, ಪ್ರಸಾದ್ ಬೈಂದೂರು, ಜಿಲ್ಲಾ ಕಾರ್ಯದರ್ಶಿಯಾದ ಪ್ರವೀಣ್ ಸೋಮಯ್ಯ ಹಾಗೂ ಯುವಮೋರ್ಚಾ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗಿಯಾಗಿದ್ದರು.