ಉಡುಪಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪದ ಕಾಡೂರಿನ ಗೋಳಿಕಟ್ಟೆ ತಿರುವಿನಲ್ಲಿ ಸಂಭವಿಸಿದೆ.
ಮೃತ ಮಹಿಳೆಯನ್ನು ಬೀಜಾಡಿಯ ಜಯಲಕ್ಷ್ಮೀ(68) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ರಾಮಚಂದ್ರ ಭಟ್, ಸುಜಾತಾ, ಮಂಗಳ, ಪ್ರೇಮಾ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಬ್ಬಿನಾಲೆ ಜಾತ್ರೆ ಮುಗಿಸಿ ಐವರು ಕಾರಿನಲ್ಲಿ ಬೆಳಿಗ್ಗೆ ಮಂದಾರ್ತಿ, ಸಾಲಿಗ್ರಾಮ ಹಾಗೂ ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆಂದು ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












