ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅತ್ತ್ಯುತ್ತಮ ಅಂಕ ಗಳಿಸಿ ತೇರ್ಗಡೆಯಾದ ವಿದ್ಯಾರ್ಥಿನಿಯರು

ಉಡುಪಿ:ಕುಮಾರಿ ಸುನವ್ಯ.ಎಚ್.ಎನ್, ಸಂಹಿತಾ ಎಚ್.ಎನ್ ರವರು ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಿದ ವಿಶೇಷ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅತ್ತ್ಯುತ್ತಮ (ಕ್ರಮವಾಗಿ 97.25%, 87.25%) ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ.

ಉಡುಪಿಯ ಸುನಾಗ್ ಆರ್ಥೋ ಕೇರ್ ಮತ್ತು ಮಲ್ಟಿಸ್ಪೆಷಾಲಿಟಿ ಸೆಂಟರ್‌ನ ಸಂಸ್ಥಾಪಕರು ಮತ್ತು ವೈದ್ಯಕೀಯ ನಿರ್ದೇಶಕರಾದ ಡಾ. ನರೇಂದ್ರ ಕುಮಾರ್ ಹೆಚ್.ಎಸ್ ಮತ್ತು ಡಾ.ವೀಣಾ ನರೇಂದ್ರ ರವರ ಪುತ್ರಿಯರಾದ ಇವರು ಉಡುಪಿಯ ಹೆಜ್ಜೆ ಗೆಜ್ಜೆ ನೃತ್ಯ ಸಂಸ್ಥೆಯ ನಿರ್ದೇಶಕಿ ವಿದುಷಿ ಯಶಾ ರಾಮಕೃಷ್ಣರಲ್ಲಿ ಭರತನಾಟ್ಯ ಕಲಿಯುತ್ತಿದ್ದು ಇಬ್ಬರೂ ಬ್ರಹ್ಮಾವರದ ಲಿಟಲ್ ರಾಕ್ ಇಂಡಿಯನ್ ಶಾಲೆಯಲ್ಲಿ ಕ್ರಮವಾಗಿ ಏಳು ಮತ್ತು ಆರನೆಯ ತರಗತಿಯಲ್ಲಿ ಓದುತ್ತಿದ್ದಾರೆ.