ಭಾರೀ ಮಳೆಯಿಂದ ಆತ್ರಾಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು; ಅವಾಂತರ ಸೃಷ್ಟಿ

ಉಡುಪಿ: ಉಡುಪಿ ಆತ್ರಾಡಿಯಲ್ಲಿ ಸತತ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದಾಗಿ ಇಲ್ಲಿ ಕೃತಕ ನೆರೆ ಬಂದಿದ್ದು ನೀರು ಹರಿದು ಹೋಗಲು ಜಾಗವಿಲ್ಲದೆ ಮನೆಗಳಿಗೆ ನುಗ್ಗಿದೆ.

ಅವ್ಯವಸ್ಥೆ ಜೊತೆಗೆ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದಾಗಿ ಈ ಘಟನೆ ಸಂಭವಿಸಿದ್ದು, ಮನೆಯ ಒಳಗೆಲ್ಲ ನೀರು ತುಂಬಿಕೊಂಡಿದ್ದರಿಂದ ಮನೆಯವರು ಒದ್ದಾಡುವಂತಾಗಿದೆ.

ಹೆದ್ದಾರಿ ಕಾಮಗಾರಿ ಸಂದರ್ಭವೇ ಇಲ್ಲಿನ ನಿವಾಸಿಗಳು ಸಮರ್ಪಕ ಒಳಚರಂಡಿ ವ್ಯವಸ್ಥೆಗೆ ಒತ್ತಾಯಿಸುತ್ತಿದ್ದರು. ಆದರೆ ಹೆದ್ದಾರಿ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಇಲ್ಲಿಯ ಜನರು ತೊಂದರೆ ಅನುಭವಿಸಬೇಕಾಗಿದೆ.