ಮಂಗಳೂರು: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿಕ್ ಭಟ್ ತಾಯಿ ಹಾಗೂ ಅಕ್ಕನನ್ನು ಪೊಲೀಸರು ಬಂದಿಸಿದ್ದಾರೆ. ಶ್ಯಾಮಲಾ ಭಟ್(61) ಹಾಗೂ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್(36) ಬಂಧಿತರು.
ಇಬ್ಬರ ವಿರುದ್ಧ ಕಾರ್ತಿಕ್ ಭಟ್ ಪತ್ನಿಯ ತಾಯಿ ಸಾವಿತ್ರಿ ನೀಡಿದ ದೂರಿನಂತೆ 308 ಭಾರತೀಯ ನ್ಯಾಯ ಸಂಹಿತೆ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಮುಲ್ಕಿ ಪೊಲೀಸರು ಬಂಧಿಸಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕಳೆದ ದಿನದ ಹಿಂದೆ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಜಲಜಾಕ್ಷಿ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸ್ತವ್ಯವಿದ್ದ ಕಾರ್ತಿಕ್ ಭಟ್(32) ಎಂಬಾತನು ತನ್ನ ಪತ್ನಿ ಪ್ರಿಯಾಂಕ(28) ಮಗು ಹೃದಯ್ (4) ಹತ್ಯೆಗೈದು ತಾನೂ ರೈಲಿನಡಿ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ನಡೆದ ಮಹತ್ವದ ಬೆಳವಣಿಗೆಯಲ್ಲಿ ಮೃತ ಕಾರ್ತಿಕ್ ಭಟ್ ಡೆತ್ ನೋಟ್ ಪತ್ತೆಯಾಗಿದ್ದು ನಾಲ್ಕು ಪುಟಗಳ ಡೆತ್ ನೋಟ್ ನಲ್ಲಿ ತಾಯಿ ಶ್ಯಾಮಲಾ ಹಾಗೂ ಅಕ್ಕ ಕಣ್ಮಣಿಯನ್ನು ಪ್ರಸ್ತಾಪ ಮಾಡಿ ತಮಗೆ ತೊಂದರೆ ಕೊಟ್ಟಿದ್ದಾರೆ ಎಂದು ಹೇಳಿದ್ದಾನೆ.