ಮಂಗಳೂರು: ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ – ದೂರು ದಾಖಲು.

ಮಂಗಳೂರು: ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರವೆಸಗಿರುವ ಘಟನೆ ಮಂಗಳೂರು ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯುವತಿ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು, ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗ ವಿನೋದ್‌ರಾಜ್‌ ಎಂಬಾತನ ಸ್ನೇಹವಾಗಿತ್ತು. ಮಾ. 23ರಂದು ಯುವತಿ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇದ್ದಾಗ ಅಲ್ಲಿಗೆ ಬಂದ ಆರೋಪಿ ವಿನೋದ್‌ರಾಜ್‌ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ.

ಅನಂತರವು ಯುವತಿಗೆ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ಬಳಿಕ ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.