ಮಂಗಳೂರು: ಸುರತ್ಕಲ್ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ; ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ

ಮಂಗಳೂರು: ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ನಿನ್ನೆ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್ ನ ಬದ್ರಿಯಾ ಪುರಸಭೆ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ನಡೆದಿದ್ದು, ಪರಿಸ್ಥಿತಿ ಸ್ಥಳದಲ್ಲಿ ಉದ್ವಿಗ್ನವಾಗಿದೆ.

ನಿನ್ನೆ ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಗೆ ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಹಿಂದೂ ಮುಖಂಡರ ವಿರುದ್ದ ಪ್ರಕರಣ ದಾಖಲು:
ಪ್ರಚೋದನಕಾರಿ ಹೇಳಿಕೆ ನೀಡಿದ ವಿಚಾರವಾಗಿ ವಿಹೆಚ್ ಪಿ ಹಾಗೂ ಬಜರಂಗದಳ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾಮಾಜಿಕ ಜಾಲತಾಣ ಮೂಲಕ ವಿಡಿಯೊ ಹರಿಬಿಟ್ಟಿದ್ದ ಪುನೀತ್ ಅತ್ತಾವರ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.