ಮಂಗಳೂರು: ನಗರದ ಕೊಟ್ಟಾರಚೌಕಿ ಬಳಿ ನಿಯಂತ್ರಣ ತಪ್ಪಿ ಸ್ಕೂಟರ್ ರಸ್ತೆಗೆ ಬಿದ್ದು ಸವಾರ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.
ಮೃತಪಟ್ಟವರು ಪಿ. ಗಣೇಶ ಪೈ (67). ಅವರು ಜೂ. 4ರಂದು ಮಧ್ಯಾಹ್ನ ಸ್ಕೂಟರ್ನಲ್ಲಿ ಕೋಡಿಕಲ್ ಕಡೆಯಿಂದ ಕೊಟ್ಟಾರಚೌಕಿ ಕಡೆಗೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಬರುತ್ತಿದ್ದಾಗ ಕೊಟ್ಟಾರ ಚೌಕಿ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












