ಮಂಜೇಶ್ವರ: ಆ್ಯಂಬುಲೆನ್ಸ್- ಕಾರು ನಡುವೆ ಭೀಕರ ಅಪಘಾತ – ಮೂವರು ಸಾವು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಶಿವಕುಮಾರ್ (54), ಶರತ್ ಮೆನೋನ್(23) ಮತ್ತು ಸೌರವ್(15) ಎಂದು ಗುರುತಿಸಲಾಗಿದೆ.

ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಉಷಾ, ಜೊತೆಗಿದ್ದ ಶಿವದಾಸ್ ಮತ್ತು ಆ್ಯಂಬುಲೆನ್ಸ್ ಚಾಲಕ ಗಾಯಗೊಂಡಿದ್ದಾರೆ.

ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಕಾಸರಗೋಡಿಗೆ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ.