ಮಣಿಪಾಲ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಮಣಿಪಾಲ: ಮಹಿಳೆಯೊಬ್ಬರು ಸಾಲದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಅನಂತನಗರದಲ್ಲಿ ನಡೆದಿದೆ.

ಮಣಿಪಾಲದ ಶ್ರುತಿ ಆತ್ಮಹತ್ಯೆ ಮಾಡಿಕೊಂಡವರು. 5 ವರ್ಷಗಳ ಹಿಂದೆ ಇವರಿಗೆ ಮದುವೆಯಾಗಿದ್ದು, ಅನಂತರ ಅನಂತನಗರದ ಮಂಚಿಕುಮೇರಿಯಲ್ಲಿ ವಾಸಮಾಡಿಕೊಂಡಿದ್ದರು. ಎರಡು ವರ್ಷಗಳ ಹಿಂದೆ ಗಂಡನ ಕಾಯಿಲೆಗೆ ಸಾಲ ಮಾಡಿಕೊಂಡು ಚಿನ್ನಾಭರಣಗಳನ್ನು ಬ್ಯಾಂಕಿನಲ್ಲಿ ಅಡಮಾನ ಇರಿಸಿದ್ದರು.

ಸಾಲ ಮಾಡಿಕೊಂಡ ಚಿಂತೆ ಹಾಗೂ ಚಿನ್ನವನ್ನು ಬಿಡಿಸಲು ಆಗಲಿಲ್ಲ ಎಂಬ ಚಿಂತೆಯಿಂದ ಮನನೊಂದು ಶ್ರುತಿ ಅವರು ನ.3ರಂದು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ