ಮಣಿಪಾಲ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡಿ ಹಲವರಿಗೆ ಜೀವದಾನ ನೀಡಿದ ಯುವಕ

ಉಡುಪಿ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ಯುವಕನ ಕುಟುಂಬಸ್ಥರು ಅಂಗಾಂಗ ದಾನ ನಿರ್ಧಾರದ ಮೂಲಕ ಸಾರ್ಥಕತೆ ಮೆರೆದಿದ್ದಾರೆ.

ಹೌದು, ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕುಂದಾಪುರದ ನಿವಾಸಿ ರಾಘವೇಂದ್ರ(35)ಅವರನ್ನ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ನಂತರ ರಾಘವೇಂದ್ರ ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣ ಕಂಡುಬರಲಿಲ್ಲ. ಮಾನವ ಅಂಗಾಂಗ ಕಸಿ ಕಾಯಿದೆ 1994 ರ ಪ್ರಕಾರ ಪರಿಣಿತ ವೈದ್ಯರ ಸಮಿತಿ ಎರಡು ಬಾರಿ ಅಧಿಕೃತವಾಗಿ ಬ್ರೈನ್ ಡೆಡ್ ಎಂದು ಘೋಷಿಸಿತು.

Oplus_131072

ಈ ವೇಳೆ ಅವರ ಕುಟುಂಬ ಸದಸ್ಯರು ಅಂಗಗಳನ್ನು ದಾನ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ರಾಘವೇಂದ್ರ ಅವರ ಒಂದು ಕಿಡ್ನಿ ಮತ್ತು ಯಕೃತ್ತನ್ನು ಮಂಗಳೂರಿನ ಎಜೆ ಆಸ್ಪತ್ರೆ, ಶ್ವಾಸಕೋಶವನ್ನು ಸಿಕಂದರಾಬಾದ್‌ನ ಕಿಮ್ಸ್ ಆಸ್ಪತ್ರೆಗೆ ಹಾಗೂ ಒಂದು ಕಿಡ್ನಿ ಎರಡು ಕಾರ್ನಿಯಾ ಮತ್ತು ಚರ್ಮವನ್ನು ಮಣಿಪಾಲದ ರೋಗಿಗಳಿಗೆ ಬಳಸಲು ಉಳಿಸಿಕೊಳ್ಳಲಾಗಿದೆ.