ಮತದಾನದ ದಿನದಂದು ವೇತನ ಸಹಿತ ರಜೆ

ಉಡುಪಿ: ಚುನಾವಣಾ ಆಯೋಗವು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಿಸಿದ್ದು, ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಯಾವುದೇ ಅರ್ಹ ಮತದಾರರು ಮತದಾನದ ಸಾಂವಿಧಾನಿಕ ಹಕ್ಕಿನಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ, ಮತದಾನ ದಿನದಂದು ಮತದಾನ ಮಾಡಲು ಅನುಕೂಲವಾಗುವಂತೆ ಸಂಘ-ಸಂಸ್ಥೆಗಳಲ್ಲಿ, ವಾಣಿಜ್ಯ ಉದ್ದಿಮೆಗಳಲ್ಲಿ, ಕೈಗಾರಿಕಾ ಘಟಕ ಸೇರಿದಂತೆ ಸಣ್ಣ ಮತ್ತು ದೊಡ್ಡ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕ ಹಾಗೂ ಸಿಬ್ಬಂದಿಗಳಿಗೆ ಮತದಾನದ ದಿನದಂದು ವೇತನ ಸಹಿತ ರಜೆಯನ್ನು ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.