ಮಲ್ಪೆ: ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳ ತಂಡ

ಉಡುಪಿ: ದಂಪತಿ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಉಡುಪಿಯ ಮಲ್ಪೆ ಬೀಚ್ ಬಳಿ ನಡೆದಿದೆ.

ಬೀಚ್ ಬಳಿ ಬೈಕ್ ಪಾರ್ಕಿಂಗ್ ವಿಚಾರದಲ್ಲಿ ವಾಗ್ವಾದ ಶುರುವಾಗಿತ್ತು. ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ಮೇಲೆ ಹಲ್ಲೆ ನಡೆದಿದೆ.

ಶೇಖರ್ ತಿಂಗಳಾಯ ಮತ್ತು ಗೀತಾ ಹಲ್ಲೆಗೊಳಗಾದ ದಂಪತಿ.ಸಾಗರ್, ಚರಣ್, ಯಶವಂತ್, ಕಿಶೋರ್, ರಾಜ ಮೇಲೆ ಹಲ್ಲೆ ಆರೋಪ ಹೊರಿಸಲಾಗಿದೆ. ಸಿಸಿ ಕ್ಯಾಮೆರಾದಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ.ಉಡುಪಿ ಸರ್ಕಾರಿ ಆಸ್ಪತ್ರೆಯಲ್ಲಿ ದಂಪತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Oplus_131072
Oplus_131072