ಮಲ್ಪೆ ಬೀಚ್: ಪ್ರವಾಸೀ ಬೋಟ್ ಚಟುವಟಿಕೆ ತಾತ್ಕಾಲಿಕ ಸ್ಥಗಿತ.

ಉಡುಪಿ: ರಾಜ್ಯದ ಸಮುದ್ರ ಕರಾವಳಿಯ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಹಾರ್ಬರ್ ಕ್ರಾಫ್ಟ್ ನಿಯಮದಡಿ ನೀಡಲಾದ ಪರವಾನಿಗೆಯಂತೆ ಮಲ್ಪೆ ಬೀಚ್, ಸೀವಾಕ್ ಪ್ರದೇಶದಲ್ಲಿ ಓಡಾಟ ನಡೆಸುವ ಎಲ್ಲಾ ತರಹದ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಮತ್ತು ಸೈಂಟ್ ಮೆರೀಸ್ ದ್ವೀಪಕ್ಕೆ ತೆರಳುವಂತಹ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಮೇ 16 ರಿಂದ ಸೆಪ್ಟೆಂಬರ್ 15 ರವರೆಗೆ ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಸ್ಥಗಿತಗೊಳಿಸಲಾಗಿದೆ ಎಂದು ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.