ಮಲ್ಪೆ: ರಿಕ್ಷಾ ಚಾಲಕ ನಾಪತ್ತೆ..!

ಉಡುಪಿ, ಮಾರ್ಚ್ 30: ರಿಕ್ಷಾ ಚಾಲಕ ವೃತ್ತಿ ಹಾಗೂ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಮಲ್ಪೆಯ ಮಹಮ್ಮದ್ ಪೈಜಲ್ (36) ಎಂಬ ವ್ಯಕ್ತಿಯು ಮಾರ್ಚ್ 27 ರಂದು ರಾತ್ರಿ 11 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪ್ತತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆಯ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ:9480805447, ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.