ಮಾನಸಿಕ ಅಸ್ವಸ್ಥೆ ನಾಪತ್ತೆ

ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬ್ರಹ್ಮಾವರ ತಾಲೂಕು ಬೈಕಾಡಿ ಗ್ರಾಮದ
ಬೊಬ್ಬರ್ಯ ಜಡ್ಡು ನಿವಾಸಿ ರೂಪಾ (57) ಎಂಬ ಮಹಿಳೆಯು ಜುಲೈ 15 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ
ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಎಣ್ಣೆ- ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ:೦೮೨೦-೨೫೬೧೦೪೪ ಅಥವಾ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: ೦೮೨೦-೨೫೬೧೯೬೬ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ
ಪ್ರಕಟಣೆ ತಿಳಿಸಿದೆ.