ಚಿಕ್ಕಮಗಳೂರು: ತಲೆಗೆ ಸುತ್ತಿಗೆಯಿಂದ ಹೊಡೆದು ಅಳಿಯನೋರ್ವ ಅತ್ತೆಯನ್ನೇ ಹತ್ಯೆಗೈದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದ್ದು ಭಾನುವಾರ ವಿಚಾರ ಬೆಳಕಿಗೆ ಬಂದಿದೆ.
ಯಮುನಾ(65) ಮೃತ ದುರ್ದೈವಿಯಾಗಿದ್ದು, ಅಳಿಯ ಶಶಿಧರ್ ಕೊಲೆ ಆರೋಪಿಯಾಗಿದ್ದಾನೆ.
ಅತ್ತೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಹತ್ಯೆಗೈಯ್ಯಲಾಗಿದ್ದು ಘಟನೆಯ ಬಳಿಕ ಆರೋಪಿ ಶಶಿಧರ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಘಟನೆ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು ತಲೆಮರೆಸಿಕೊಂಡಿರುವ ಶಶಿಧರನ ಪತ್ತೆಗೆ ಬಲೆ ಬೀಸಿದ್ದಾರೆ.












