ಮೂಡುಬೆಳ್ಳೆ ಶಿಲುಬೆ ಧ್ವಂಸ ಪ್ರಕರಣ; ಆರೋಪಿಗಳ ಬಂಧನಕ್ಕೆ ಭಾರತೀಯ ಕ್ರೈಸ್ತ ಒಕ್ಕೂಟ ಆಗ್ರಹ

ಉಡುಪಿ: ಮೂಡುಬೆಳ್ಳೆಯ ಕಟ್ಟಿಂಗೇರಿ ಗ್ರಾಮದಲ್ಲಿರುವ ಕುದ್ರಮಾಲೆಯ ಬೆಟ್ಟದಲ್ಲಿ ಜೋಸೆಫ್ ವಲೇರಿಯನ್ ಲೋಬೊ ಇವರ ಖಾಸಗಿ ಜಾಗದಲ್ಲಿ ನಿರ್ಮಿಸಿದ ಪವಿತ್ರ ಶಿಲುಬೆಯನ್ನು ಧ್ವಂಸ ಮಾಡಿ ಕ್ರೈಸ್ತರ ಭಾವನೆಗಳಿಗೆ ನೋವನ್ನು ಉಂಟುಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕೆಂದು ಭಾರತೀಯ ಕ್ರೈಸ್ತ ಒಕ್ಕೂಟ ಒತ್ತಾಯಿಸಿದೆ.

ಈ‌ ಕುರಿತು ಪ್ರತಿಕ್ರಿಯೆ ನೀಡಿದ ಭಾರತೀಯ ಕ್ರೈಸ್ತ ಒಕ್ಕೂಟ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತನ್ನ ಅವರು, ಕ್ರೈಸ್ತ ಸಮುದಾಯದ ಭಕ್ತಾದಿಗಳು ಬಹಳಷ್ಟು ಪವಿತ್ರತೆಯಿಂದ ನೋಡುವಂತಹ ಶಿಲುಬೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಕ್ರೈಸ್ತ ಸಮುದಾಯದ ಭಕ್ತರಿಗೆ ನೋವು ತಂದಿದೆ. ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಕೃತ್ಯವಾಗಿದ್ದು, ಜಿಲ್ಲೆಯ ಸೌಹಾರ್ದ ವಾತಾವರಣ ಕೆಡಿಸುವ ಹುನ್ನಾರ ದುಷ್ಕರ್ಮಿಗಳಿಂದ ನಡೆದಿದೆ. ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಕೂಡಲೇ ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಬೇಕು ಎಂದು‌ ಒತ್ತಾಯಿಸಿದರು.