ಕುಂದಾಪುರ: ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇಲ್ಲಿನ ಪ್ರಥಮ ಮತ್ತು ದ್ವಿತೀಯ ಎಂ.ಬಿ.ಎ ಪದವಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲಾರದ ಡಾ. ಅಬ್ದುಲ್ ಕರೀಂ, ಶ್ರೀಮತಿ ಕ್ರಿಪಾ ಎಂ. ಎಂ (ಅಸಿಸ್ಟೆಂಟ್ ಡೈರೆಕ್ಟರ್ ಫೀಲ್ಡ್ ಪ್ರೋಗ್ರಾಮ್ ನಮ್ಮ ಭೂಮಿ) ಮತ್ತು ನಮ್ಮಭೂಮಿಯ ಸುರೇಶ, ಶ್ರೀಮತಿ ಆಶಾ ಅವರು ಉಪಸ್ಥಿತರಿದ್ದರು. ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ.ಸುಚಿತ್ರ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಮಹಿಳಾ ಸಬಲೀಕರಣ ಕುರಿತು ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಿದರು ಮತ್ತು ಸಮಾಜದಲ್ಲಿ ಪುರುಷರಷ್ಟೇ ಮಹಿಳೆಯರಿಗೂ ಸಮಾನ ಹಕ್ಕು ಇರಬೇಕೆಂದು ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ಎಂಬಿಎ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ಎಂ.ಬಿ.ಎ ವಿದ್ಯಾರ್ಥಿನಿ ಗೌತಮಿ ನಿರೂಪಣೆ ಮತ್ತು ವಂದನಾರ್ಪಣೆಮಾಡಿದರು.












