ಉಡುಪಿ: ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ರಾಮನಗರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಮನಗರ ಜಿಲ್ಲೆ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ ಮಾವಿನ ತಳಿಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮೇ 16 ರಿಂದ 19 ರ ವರೆಗೆ ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ಆಯೋಜಿಸಲಾಗುತ್ತಿದೆ.
ಮೇಳದಲ್ಲಿ ರಾಮನಗರ ಜಿಲ್ಲೆಯಿಂದ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ ಮುಂತಾದ ತಳಿಗಳ ಒಟ್ಟು 40 ಟನ್ನಷ್ಟು ಮಾವು ಮಾರಾಟಕ್ಕೆ ರೈತರು ಆಗಮಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಮೇಳದಲ್ಲಿ ಜಿಲ್ಲೆಯ ಮಾವು ಬೆಳೆಗಾರರಿಗೂ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಮಾವು ಬೆಳೆಗಾರರು ಮೇ 15 ರ ಒಳಗಾಗಿ ತಾವು ಬೆಳೆದ ಮಾವಿನ ತಳಿ ಹಾಗೂ ಲಭ್ಯತೆಯ ವಿವರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಉಡುಪಿ ಮೊ.ನಂ: 9141407672 ಕಚೇರಿ ಸಂಪರ್ಕಿಸಿ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.