ರಂಗಶಿಕ್ಷಣ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 15 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಣವನ್ನು ನೀಡುವ ಸಂಸ್ಥೆಯಾಗಿದ್ದು, ಈ ಸಂಸ್ಥೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ಚವಿದ್ಯಾಲಯದ ಮಾನ್ಯತೆ ಪಡೆದಿದೆ.

ಈ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ರಂಗ ಶಿಕ್ಷಣ ತರಬೇತಿಗೆ ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರುವ, ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರುವ ಹಾಗೂ 18 ವರ್ಷ ಮೇಲ್ಪಟ್ಟು 28 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ರಂಗಾಯಣದ ವೆಬ್‌ಸೈಟ್ http://rangayanamysore.karnataka.gov.in ಅಥವಾ ಉಪ ನಿರ್ದೇಶಕರು, ರಂಗಾಯಣ, ಮೈಸೂರು ದೂರವಾಣಿ ಸಂಖ್ಯೆ: 0821-2512639, 9148827720 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.