ರಂಗ ಶಿಕ್ಷಣ ಡಿಪ್ಲೋಮಾ: ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೆಹಳ್ಳಿಯ ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆಯಲ್ಲಿ ಪ್ರಸಕ್ತ ಸಾಲಿನ ರಂಗ ಶಿಕ್ಷಣ ಡಿಪ್ಲೋಮಾ ಪ್ರವೇಶಾತಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿಗೆ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಹೊಂದಿರಬೇಕು.

ರಂಗಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯರ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚತ್ಯ ರಂಗಭೂಮಿ ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.theatreschoolsanehalli.org ಅಥವಾ ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ಸಾಣೆಹಳ್ಳಿ, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ, ದೂರವಾಣಿ ಸಂಖ್ಯೆ: 9448398144, 88610433553, 9482942394 ಹಾಗೂ 9972007015 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.