ಮಂಗಳೂರು: ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ನೀಡಿದ್ದು, ಜುಲೈ 15 ಮತ್ತು 16ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ , ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಜುಲೈ 14ರಂದು ಆರೆಂಜ್ ಅಲರ್ಟ್ ಹಾಗೂ ಚಾಮರಾಜನಗರ, ಹಾಸನ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಜುಲೈ 15ರಂದು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗೆ ರೆಡ್ ಹಾಗೂ ಕೊಡಗು, ಹಾಸನ ಜಿಲ್ಲೆಗೆ ಆರೆಂಜ್ ಹಾಗೂ ಮೈಸೂರು ಜಿಲ್ಲೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮುಂಗಾರು ಮಳೆ ಮತ್ತಷ್ಟು ಚುರುಕಾಗಿದೆ. ವಿವಿದ ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದು, ಇನ್ನೆರಡು ದಿನಗಳ ಕಾಲ ಇದು ಜಾಸ್ತಿಯಾಗುವ ಸಾಧ್ಯತೆಯಿದೆ.ಮುಂದಿನ ವಾರ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಮನ್ಸೂಚನೆ ನೀಡಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಸಾಂಪ್ರದಾಯಿಕ ಮೀನುಗಾರಿಕೆಗೆ ಹಿನ್ನಡೆಯಾಗಿದೆ.