ಉಡುಪಿ: 2025-26ನೇ ರಾಜ್ಯ ಬಜೆಟ್‌ನಲ್ಲಿ ರಾಜ್ಯದ ಎಲ್ಲ ವರ್ಗದ ಮದ್ಯ ಮಾರಾಟ ಸನ್ನದುದಾರರ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ವತಿಯಿಂದ ಸೋಮವಾರ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಸಚಿವರು ಮತ್ತು ಉನ್ನತ ಅಧಿಕಾರಿಗಳಿಗೆ ಸಲ್ಲಿಸಲಾಯಿತು.

ಅಸೋಸಿಯೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ ಮಾತನಾಡಿ, ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಟ ಶೇ.20 ಲಾಭಾಂಶ ನೀಡಬೇಕು. ಹೆಚ್ಚುವರಿ ಅಬಕಾರಿ ಶುಲ್ಕವನ್ನು ಕಡಿಮೆ ಮಾಡಬೇಕು. ಯಾವುದೇ ಕಾರಣಕ್ಕೂ ಸನ್ನದು ಶುಲ್ಕವನ್ನು ಹೆಚ್ಚಳ ಮಾಡಬಾರದು. ಯಾವುದೇ ಕಾರಣಕ್ಕೂ ಸನ್ನದುಗಳನ್ನು ಏಲಂ ಮಾಡಬಾರದು ಎಂದು ಒತ್ತಾಯಿಸಿದರು.
ಮನವಿಯನ್ನು ಪ್ರಭಾರ ಅಪರ ಜಿಲ್ಲಾಧಿಕಾರಿ ನಾಗರಾಜ್ ನಾಯಕ್ ಸ್ವೀಕರಿಸಿದರು. ನಿಯೋಗದಲ್ಲಿ ಅಸೋಸಿಯೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ್ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಜನಾರ್ದನ ಪೂಜಾರಿ, ಕಾರ್ಕಳ ಅಧ್ಯಕ್ಷ ಶೋಧನ್ ಕುಮಾರ್, ಕುಂದಾಪುರ ಅಧ್ಯಕ್ಷ ರೋಹಿತ್ ಕುಮಾರ್ ಶೆಟ್ಟಿ, ಪ್ರಮುಖರಾದ ಸಂತೋಷ್ ಕುಮಾರ್ ಶೆಟ್ಟಿ, ಉದಯ ಕುಮಾರ್ ಶೆಟ್ಟಿ, ಉಮೇಶ್ ರಾವ್ ಬಜಗೋಳಿ, ಭರತ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.












