ವಸತಿ ವಿಜ್ಞಾನ ಕಾಲೇಜು ಪ್ರವೇಶಕ್ಕೆ: ಅರ್ಜಿ ಆಹ್ವಾನ

ಉಡುಪಿ, ಏಪ್ರಿಲ್ 08: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಸತಿ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಎರಡು ಪದವಿ ಪೂರ್ವ ಕಾಲೇಜುಗಳಾದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಮಿಯ್ಯಾರು ಕಾರ್ಕಳ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜು ಆರೂರು ಬ್ರಹ್ಮಾವರ ವಸತಿ ಕಾಲೇಜುಗಳ ಪ್ರಥಮ ಪಿ.ಯು.ಸಿ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಮಿಯ್ಯಾರು ಕಾರ್ಕಳ ಮೊ.ಸಂ: 9353398961 ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜು ಆರೂರು ಬ್ರಹ್ಮಾವರ ಮೊ.ನಂ:7012988065 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.