ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ನ ಮೇಲಿನ ಸೆಸ್ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೀಗಾಗಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ಸರಾಸರಿ 3 ರೂ ಮತ್ತು ಡೀಸೆಲ್ ಬೆಲೆಯಲ್ಲಿ 3.5 ರೂ ಹೆಚ್ಚಳ ಮಾಡಲಾಗಿದೆ.
ಗ್ಯಾರಂಟಿ ಯೋಜನೆಗಳ ಖರ್ಚು ಸರಿದೂಗಿಸಲು ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡಿದೆ. ಇಂದು ಈ ಬಗ್ಗೆ ಹೊರಡಿಸಿದ್ದು ತಕ್ಷಣದಿಂದ ಜಾರಿಗೆ ಬರಲಿದೆ.
ಉಡುಪಿ ನಗರದಲ್ಲಿ ಪೆಟ್ರೋಲ್ ಬೆಲೆ 99.53 ರೂ ಇದ್ದು, ಮುಂದೆ 102.55 ರೂ ಆಗಿದೆ. ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 85.62 ರೂ ಇದ್ದು ಏರಿಕೆಯಾಗಿ 88.61 ರೂ ಆಗಿದೆ.