ವಿಕಲಚೇತನರ ರಾಷ್ಟ್ರ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ 05 ವಿಭಾಗಗಳಲ್ಲಿ ಮತ್ತು ಸಂಸ್ಥೆಗಳಿಂದ 08 ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿಗಾಗಿ ವೆಬ್‌ಸೈಟ್ www.award.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.