ವಿಕಲಚೇತನ ಮಕ್ಕಳಿಗೆ ವಸತಿ ಶಾಲೆ, ಕಾಲೇಜುಗಳಲ್ಲಿ ಶೇ.10 ಮೀಸಲಾತಿ.

ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್ ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆ ಹಾಗೂ ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ ಶೇ.25 ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಎಚ್.ಐ.ವಿಗೆ ತುತ್ತಾದ ಪೋಷಕರ ಮಕ್ಕಳು,
ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳಿಗೆ ಶೇ. 10 ರ ಮೀಸಲಾತಿಯನ್ನು ನಿಗಧಿಪಡಿಸಿ, 6 ನೇ ತರಗತಿಗೆ ಪ್ರವೇಶ ಕಲ್ಪಿಸಲು ಅನುಮೋದನೆ ನೀಡಿ, ರಾಜ್ಯ ಸರ್ಕಾರವು ಆದೇಶಿಸಿದ್ದು, ಜಿಲ್ಲೆಯ ವಿಕಲಚೇತನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.