ವಿಧಾನ ಪರಿಷತ್ ಚುನಾವಣೆ: ಬಿಜೆಪಿ 5 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ.

ಬೆಂಗಳೂರು: ಕರ್ನಾಟಕದ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ 6 ಸ್ಥಾನಗಳ ಚುನಾವಣೆಗೆ ಬಿಜೆಪಿ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಕಲಬುರಗಿ ಕೇಂದ್ರಿತ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ವಿಧಾನಪರಿಷತ್‌ ಮಾಜಿ ಸದಸ್ಯ ಅಮರನಾಥ್‌ ಪಾಟೀಲ್‌.

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಲಿ ಸದಸ್ಯ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಹಾಲಿ ಸದಸ್ಯ ವೈ.ಎ.ನಾರಾಯಣ ಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮುಖಂಡ ಇ.ಸಿ.ನಿಂಗರಾಜಗೌಡ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಚನ್ನಗಿರಿ ಹಾಗೂ ಶಿವಮೊಗ್ಗದ ವೈದ್ಯ ಡಾ.ಧನಂಜಯ ಸರ್ಜಿ ಅವರ ಹೆಸರನ್ನು ಬಿಜೆಪಿ ಪ್ರಕಟಿಸಿದೆ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಯಾರ ಹೆಸರನ್ನೂ ಪ್ರಕಟಿಸದೇ ಬಾಕಿ ಉಳಿಸಿದ್ದು, ಇದನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆಯೇ ಪ್ರಶ್ನೆ ಎದ್ದಿದೆ.

ಆರು ಕ್ಷೇತ್ರದಲ್ಲಿ ಬಿಜೆಪಿಗೆ ನಾಲ್ಕು ಹಾಗೂ ಜೆಡಿಎಸ್‌ಗೆ ಎರಡು ಕ್ಷೇತ್ರ ಬಿಟ್ಟುಕೊಡುವ ಕುರಿತು ಮಾತುಕತೆಗಳು ನಡೆದಿತ್ತು. ಬಿ.ಎಸ್‌.ಯಡಿಯೂರಪ್ಪ, ಜೆಡಿಎಸ್‌ಗೆ ಎರಡು ಕ್ಷೇತ್ರ ಬಿಟ್ಟುಕೊಡುವ ವಿಚಾರವನ್ನು ಮೈಸೂರಿನಲ್ಲಿ ಪ್ರಸ್ತಾಪಿಸಿದ್ದರು. ಆದರೆ ಬಿಜೆಪಿ 5 ಅಭ್ಯರ್ಥಿಗಳ ಹೆಸರು ಘೋಷಿಸಿದೆ.