ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಿಗಮಗಳ ವೆಬ್‌ಸೈಟ್ ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ ಸಂಖ್ಯೆ: 9482300400, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಬಿ ಬ್ಲಾಕ್, ರಜತಾದ್ರಿ ಮಣಿಪಾಲ ದೂ.ಸಂಖ್ಯೆ: 0820-2574884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.