ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಮೇ 08: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಹೆಲಿಕಾಪ್ಟರ್-ಎಂ.ಆರ್.ಓ ವಿಭಾಗದ ಸ್ಕೇಲ್ ಡಿ-6 ಹುದ್ದೆ ಹಾಗೂ ದೇಶದ ವಿವಿಧ ಸ್ಥಳಗಳಲ್ಲಿ ಕೆಲಸ ನಿರ್ವಹಿಸಲು ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಪದವೀಧರರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೇ 1 2024 ರಂದು ಅಥವಾ ಅದಕ್ಕೂ ಮೊದಲು ಮಾನ್ಯತೆ ಪಡೆದ ತಾಂತ್ರಿಕ ಮಂಡಳಿಯಿಂದ ಅಗತ್ಯವಿರುವ ಡಿಪ್ಲೋಮಾ ಪದವಿ ಪಡೆದಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಮೇ 11 ರ ಒಳಗೆ ವೆಬ್‌ಸೈಟ್ www.hal-india.co.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದಿ,್ರ ಮಣಿಪಾಲ ಉಡುಪಿ, ದೂ.ಸಂ: 080-22323231 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.