ಉಡುಪಿ: ವ್ಯಕ್ತಿಯೊಬ್ಬರು ನಾಯಿಯನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ಎಳೆದುಕೊಂಡು ಹೋದ ಅಮಾನವೀಯ ಘಟನೆ ಕಾಪು ತಾಲೂಕಿನ ಶಿರ್ವಾದಲ್ಲಿ ನಡೆದಿದೆ.
ಶ್ವಾನವನ್ನು ಸ್ಕೂಟರ್ ನ ಹಿಂಬದಿಗೆ ಕಟ್ಟಿಕೊಂಡು ಎಳೆದೊಯ್ಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಾಯಿಯ ಕೊರಳಿಗೆ ಸರಪಳಿ ಹಾಕಿ ಸರಪಳಿಯನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ಶಿರ್ವ ಪೇಟೆಯಲ್ಲಿ ಸುಮಾರು ದೂರ ಎಳೆದೊಯ್ದ ಅಮಾನವೀಯ ದೃಶ್ಯ ಎಲ್ಲೆಡೆ ವೈರಲ್ ಆಗಿದೆ. ವ್ಯಕ್ತಿಯ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.












