ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಹೆಬ್ಬಾರ್ ರಾಜ್ಯಕ್ಕೆ ದ್ವಿತೀಯ.

ಕುಂದಾಪುರ: ದ್ವಿತೀಯ ಪಿಯುಸಿ 2 ನೇ ಹಂತದ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಹೆಬ್ಬಾರ್ ವಿಜ್ಞಾನ ವಿಭಾಗದಲ್ಲಿ 597 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು,ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಅಗ್ರ ಗಣ್ಯ ಸಾಧನೆ ಮೆರೆದಿದ್ದಾಳೆ.

ವಿದ್ಯಾರ್ಥಿನಿಯ ಅಪೂರ್ವ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.