ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ ಗರಿಷ್ಠ ಉದ್ಯೋಗ ಭರ್ತಿಯ ಸಾಧನೆ.

ಮಣಿಪಾಲ: ಕಳೆದ 12 ವರ್ಷಗಳಿಂದ ಕಾರ್ಯಚರಿಸುತ್ತಿರುವ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಣಿಪಾಲ, 2023-24 ಸಾಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಉಡುಪಿ, ದಕ್ಷಿಣ ಕನ್ನಡ ಸುತ್ತಮುತ್ತಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ 85%ರಷ್ಟು ಉದ್ಯೋಗ ಲಭಿಸಿದೆ.

ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ಸಂಸ್ಥೆಯು, ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರವನ್ನು ನೀಡುತ್ತದೆ. ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದು.

ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಡಿ.ಸಿ.ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿಯಲ್ಲಿರುವ ಸಂಸ್ಥೆ(9901722527)ಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿರುತ್ತದೆ.