ಸಂತ್ರಸ್ತೆಯ ಅಪಹರಣ ಪ್ರಕರಣ: ಮಾಜಿ ಸಚಿವ ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ.

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲುಪಾಲಾಗಿದ್ದಾರೆ. ಕೆಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಪ್ರಕಟಿಸಿದೆ.
ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ರೇವಣ್ಣರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣರನ್ನು ಅಧಿಕಾರಿಗಳು ಎಸ್​ಐಟಿ ಕಚೇರಿಯಿಂದ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಿದ್ದಾರೆ. ಕೆ.ಆರ್‌.ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್‌ ಆದೇಶ ಪ್ರಕಟಿಸಿದೆ.