ಸುಳ್ಯ: ವಿದ್ಯಾರ್ಥಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಕಾಲೇಜು ವಿದ್ಯಾರ್ಥಿಯೊಬ್ಬ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಬೆಳ್ಳಾರೆ ಗ್ರಾಮದ ನೆಟ್ಟಾರಿನ ಕಿನ್ನಿಮಜಲು ಹುಕ್ರಪ್ಪ ಅವರ ಪುತ್ರ, ಸುಳ್ಯ ಖಾಸಗಿ ಕಾಲೇಜಿನ ವಿದ್ಯಾರ್ಥಿ ಚರಣ್‌ ಕುಮಾರ್‌ ಕೆ. ಮೃತರು ಎಂದು ತಿಳಿದು ಬಂದಿದೆ.

ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.