ಮುಂಬೈ: ಸಾರ್ವಜನಿಕ ವಲ ಯದಲ್ಲಿ ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತನ್ನ ಸಾಲದ ಮೇಲಿನ ಬಡ್ಡಿದರ ವನ್ನು ಶೇ. 0.25ರಷ್ಟು ಇಳಿಕೆ ಮಾಡಿದೆ. ಇಳಿಕೆ ಫೆ.15 ರಿಂದಲೇ ಜಾರಿಗೆ ಬರಲಿದೆ ಎಂದು ಎಸ್‌ಬಿಐ ತಿಳಿಸಿದೆ.
ಫೆ.7ರಂದು ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಶೇ.0.25ರಷ್ಟು ಕಡಿತಗೊಳಿಸಿ ಶೇ.6.25ಕ್ಕೆ ಇಳಿಕೆ ಮಾಡಿದ ಬೆನ್ನಲ್ಲೇ ಎಸ್‌ಬಿಐ ಈ ನಿರ್ಧಾರ ಪ್ರಕಟಿ ಸಿದೆ. ಹೀಗಾಗಿ ಗೃಹ, ವಾಹನ,ವೈಯಕ್ತಿಕ, ವಾಣಿಜ್ಯ ಸಾಲದ ಮೇಲಿನ ಸಾಲದ ಬಡ್ಡಿದರಗಳು ಇಳಿಕೆಯಾಗಲಿವೆ. ಪರಿಣಾಮ ಗ್ರಾಹಕರ ಮಾಸಿಕ ಇಎಂಐ ಮೊತ್ತದಲ್ಲಿ ಇಳಿಕೆ ಕಂಡು ಬರಲಿದೆ.
ಆರ್‌ಬಿಐ ಬಡ್ಡಿದರವನ್ನು ಇಳಿಸಿದ ಪ್ರತಿಯಾಗಿ ಕಳೆದ ವಾರ ಕೆನಡಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕರೂರ್ ವೈಶ್ಯ ಬ್ಯಾಂಕ್, ಆರ್ ಬಿಎಲ್ ಬ್ಯಾಂಕ್‌ಗಳು ಬಡ್ಡಿ ದರವನ್ನು ಇಳಿಕೆ ಮಾಡಿದ್ದವು.












