ಹಾಲಾಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು.

ಶಂಕರನಾರಾಯಣ: ಹಾಲಾಡಿ ಗ್ರಾಮದಲ್ಲಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜೂ.25ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಹಾಲಾಡಿ ಗ್ರಾಮದ ಶೇಖರ(74) ಎಂದು ಗುರುತಿಸಲಾಗಿದೆ.

ಇವರು ಮನೆಯ ಹಿಂಬದಿಯ ಅಡಿಕೆ ತೋಟದಲ್ಲಿರುವ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.