ಹಾಸನದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಭರ್ಜರಿ ಜಯಭೇರಿ: ಪ್ರಜ್ವಲ್‌ಗೆ ಹೀನಾಯ ಸೋಲು

ಹಾಸನ : ಹಾಸನ ಲೋಕಸಭಾ ಚುನಾವಣಾ ಮತ ಎಣಿಕೆ ಮುಗಿದಿದ್ದು, ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸುಮಾರು 1ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ 25 ವರ್ಷಗಳ ಬಳಿಕ ಈ ಕ್ಷೇತ್ರವನ್ನು ಜೆಡಿಎಸ್‌ನಿಂದ ಕಸಿದುಕೊಳ್ಳುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ.
ಪೆನ್‌ಡ್ರೈವ್‌ ಹಗರಣದಲ್ಲಿ ಸಿಲುಕಿರುವ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಸೋಲುವ ಮೂಲಕ ದೇವೇಗೌಡ ಕುಟುಂಬವೂ ಆಘಾತ ಅನುಭವಿಸಿದೆ.