ಹಿರಿಯಡಕ: ವ್ಯಕ್ತಿ ನಾಪತ್ತೆ

ಹಿರಿಯಡಕ: ಕುದಿ ಗ್ರಾಮದ ಕೊಂಡಾಡಿ ನಿವಾಸಿ ವಾಸು ನಾಯ್ಕ (58) ಎಂಬ ವ್ಯಕ್ತಿಯು ಏಪ್ರಿಲ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಗೋದಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.