ಹಿರಿಯಡಕ: 25 ಲಕ್ಷ ರೂ. ವೆಚ್ಚದ ರಸ್ತೆ ನಿರ್ಮಾಣ.

ಉಡುಪಿ: ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡ್ಡಾಂ ಗದ್ದುಗೆ ಎಂಬಲ್ಲಿ ₹25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ರಸ್ತೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶನಿವಾರ ಉದ್ಘಾಟಿಸಿದರು.

ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶೆಟ್ಟಿ, ಉಪಾಧ್ಯಕ್ಷ ಹರೀಶ್ ಸಾಲಿಯಾನ್, ಕೊಡಿಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂದೀಪ ಮಡಿವಾಳ, ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯರಾದ ರಾಘವೇಂದ್ರ, ಸಂಗೀತಾ, ಸುನಿಲ್ ಶೆಟ್ಟಿ, ಕೊಡಿಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಶೆಟ್ಟಿ, ಗದ್ದಿಗೆ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮೋಹನದಾಸ್ ಶೆಟ್ಟಿ, ಭಜನಾ ಮಂಡಳಿ ಸದಸ್ಯರು ಭಾಗವಹಿಸಿದ್ದರು.