ಹೆಬ್ರಿ ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಉಡುಪಿ: ಹೆಬ್ರಿಯ ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಎಸ್.ಆರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಎಸ್.ಆರ್. ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರಾದ ಭಗವತಿ, ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ ಆಚಾರ್ಯ, ಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕನ್ನಡ ಶಿಕ್ಷಕರಾದ ನಾಗೇಶ್ ಅವರು ನಿರ್ವಹಿಸಿದರು.