ಹೆಬ್ರಿ: ವರಂಗ ಗ್ರಾಮದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ..!

ಹೆಬ್ರಿ: ಹೆಬ್ರಿ ತಾಲೂಕಿನ ವರಂಗ ಗ್ರಾಮದಲ್ಲಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪುಟ್ಟು (63) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಕಳೆದ ಒಂದು ತಿಂಗಳಿನಿಂದ ಜ. 14ರ ಸಂಜೆ 5 ಗಂಟೆಯ ಮಧ್ಯಾವಧಿಯಲ್ಲಿ ವರಂಗ ಗ್ರಾಮದ ಮುನಿಯಾಲು ನೀರಪಲ್ಕೆಯಲ್ಲಿರುವ ಅವರ ಮನೆಯ ಹತ್ತಿರದ ಸರಕಾರಿ ಹಾಡಿಯಲ್ಲಿ ಮರದ ಕೊಂಬೆಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶವ ಜ. 14ರಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.