ಅಂಕೋಲಾ: ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು ಈವರೆಗೆ 11 ಮಂದಿ ನಾಪತ್ತೆಯಾಗಿದ್ದು, 8 ಜನರ ಮೃತದೇಹ ಗುಡ್ಡ ತೆರವು ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಜು.24 ರಂದು ಕೇರಳ ಮೂಲದ ಟ್ಯಾಂಕರ್ ಗಂಗಾವಳಿ ನದಿಯಲ್ಲಿ ಇರುವುದು ಖಚಿತವಾಗಿದ್ದು, ಇದರ ನಡುವೆ ತಮಿಳುನಾಡು ಮೂಲಕ ಮತ್ತೋರ್ವ ಟ್ಯಾಂಕರ್ ಚಾಲಕನೊಬ್ಬನು ನಾಪತ್ತೆಯಾಗಿದ್ದಾರೆ ಅಂತ ಕುಟುಂಬಸ್ಥರು ದೂರು ನೀಡಿದ್ದಾರೆ.
ನಾಪತ್ತೆಯಾದವರು ತಮಿಳುನಾಡು ಮೂಲದ ಲಾರಿ ಚಾಲಕ ಶವರಣ.
ಶಿರೂರುನಲ್ಲಿ ಗುಡ್ಡ ಕುಸಿತವಾದ ಪಕ್ಕದಲ್ಲೆ ಈತನ ಟ್ಯಾಂಕರ್ ಇತ್ತು. ಅದನ್ನು ಜಿಲ್ಲಾಡಳಿತದವರು ಬೇರೆ ಕಡೆ ಸ್ಥಳಾಂತರ ಮಾಡಿದ್ದರು. ಟ್ಯಾಂಕರ್ ಲಾರಿ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಚಾಲಕ ಶರವಣ ನಾಪತ್ತೆ ಆದ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಆಗಿರುವ ಶರವಣ ಅವರ ಮಾವ ಸೆಂದೀಲ್ ಎಂಬುವವರು ದೂರು ದಾಖಲಿಸಿದ್ದಾರೆ.
ಆತನ ಮೊಬೈಲ್ ಬ್ಯಾಟರಿ ಕಡಿಮೆ ಆಗಿ ಮೊಬೈಲ್ ಸ್ವಿಚ್ ಆಫ್ ಆಗಿರಬಹುದು. ಆದರೆ ಬಹಳ ದಿನ ಕಳೆದರೂ ಮೊಬೈಲ್ ಆನ್ ಆಗದಿದಕ್ಕೆ ಹುಡುಕಾಟ ನಡೆಸಿದ್ದೇವೆ ಎಂದಿದ್ದಾರೆ. ಶಿರೂರು ಬಳಿಯ ಕುಡ್ಡ ಕುಸಿತದ ಮಣ್ಣಿನಡಿ ಸಿಲುಕಿರುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಹೀಗಾಗಿ ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರ ಸಂಖ್ಯೆ 12ಕ್ಕೆ ಏರಿಕೆಯಾದಂತೆ ಆಗಿದೆ.