ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ
ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ
ಖಾಲಿ ಇರುವ ಒಟ್ಟು ಅಂಗನವಾಡಿ ಕಾರ್ಯಕರ್ತೆ-57 ಹಾಗೂ ಅಂಗನವಾಡಿ ಸಹಾಯಕಿಯರು-136 ಗೌರವ ಸೇವೆಯ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ
ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಸ್ಥಳಗಳ ವಿವರ: ಉಡುಪಿ ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರು, ಕುಂದಾಪುರ ತಾಲೂಕಿನಲ್ಲಿ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರು, ಕಾರ್ಕಳ ತಾಲೂಕಿನಲ್ಲಿ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರು ಮತ್ತು
ಬ್ರಹ್ಮಾವರ ತಾಲೂಕಿನಲ್ಲಿ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇರುತ್ತವೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.