ಅಜೆಕಾರು: ಮರ್ಣೆ ಗ್ರಾ.ಪ. ಸಭಾಂಗಣದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಜನಸಂಖ್ಯಾ ದಿನಾಚರಣೆ ಕುರಿತು ಮಾಹಿತಿ ಕಾರ್ಯಕ್ರಮ ಶ್ರೀಮತಿ ಪ್ರಭಾವತಿ ನಾಯಕ್ ಅಧ್ಯಕ್ಷರು ಮರ್ನೆ ಗ್ರಾಮ ಪಂಚಾಯತ್ ಇವರ ಅಧ್ಯಕ್ಷತೆಯಲ್ಲಿ ಜು.9 ರಂದು ನಡೆಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ ಪ್ರಾಸ್ತಾವಿಕವಾಗಿ ಮಾತಾಡಿ ಪ್ರಸ್ತುತ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದು ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲು ತಿಳಿಸಿದರು.
ವೈದ್ಯಾಧಿಕಾರಿ ಡಾ. ಅನುಷಾ ಶೆಟ್ಟಿ ಅವರು ರೋಗ ಲಕ್ಷಣ, ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಮತ್ತು ಜನಸಂಖ್ಯಾ ನಿಯಂತ್ರಣ ಕುಟುಂಬ ಕಲ್ಯಾಣ ಯೋಜನೆ ಕುರಿತು ಮಾಹಿತಿ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಣಾ ಧಿಕಾರಿ ವಸಂತ್ ಶೆಟ್ಟಿ ಯವರು ಸೊಳ್ಳೆಗಳಿಂದ ಹರಡುವ ರೋಗಗಳು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಿಲಕ್ ರಾಜ್ ರವರು ‘ವಿಲೇಜ್ ಟಾಸ್ಕ್ ಪೊರ್ಸ್’ ಬಗ್ಗೆ ಮಾಹಿತಿ ನೀಡುತ್ತಾ ಪ್ರತೀ ತಿಂಗಳು ಎಲ್ಲಾ ಇಲಾಖೆಯವರೂ ಸೇರಿ ಸಮಿತಿ ಸಭೆ ನಡೆಸಿ ಸಮಸ್ಯಾತ್ಮಕ ಪ್ರದೇಶ ಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಪಿಎಚ್ ಸಿಒ ಅಶ್ವಿನಿ, ಪ್ರತಿಮಾ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು ಭಾಗಹಿಸಿದ್ದರು. ಆರೋಗ್ಯ ನಿರೀಕ್ಷಣಾಧಿಕಾರಿ ಆಶೀಕ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.












