ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ
ಮಿಯ್ಯಾರಿ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ ಖಾಲಿ ಇರುವ ರಸಾಯನ ಶಾಸ್ತ್ರ ಅತಿಥಿ ಉಪನ್ಯಾಸಕರ ಹುದ್ದೆಯ ನೇಮಕಾತಿಗಾಗಿ ಎಂ.ಎಸ್ಸಿ
(ಕೆಮಿಸ್ಟ್ರಿ) ಬಿ.ಎಡ್ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ಪದವಿ
ಪೂರ್ವ ವಸತಿ ವಿಜ್ಞಾನ ಕಾಲೇಜು ಮಿಯ್ಯಾರು, ಕಾರ್ಕಳ, ಮೊ.ನಂ:9480652056 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ
ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.